ಮಂಡ್ಯ ಜಿಲ್ಲೆಯಲ್ಲಿ ದಿನಾಂಕ: 28-02-2013 ರಂದು ಒಟ್ಟು 16 ಪ್ರಕರಣಗಳು ದಾಖಲಾಗಿದ್ದು ಅವುಗಳಲ್ಲಿ 1 ಕಳ್ಳತನ ಪ್ರಕರಣ, 1 ಮನುಷ್ಯ ಕಾಣೆಯಾದ ಪ್ರಕರಣ ಹಾಗು 14 ಇತರೆ ಪ್ರಕರಣಗಳು ವರದಿಯಾಗಿರುತ್ತವೆ.
ಕಳ್ಳತನ ಪ್ರಕರಣ :
ಕೆ.ಆರ್.ಸಾಗರ ಪೊಲೀಸ್ ಠಾಣೆ ಮೊ.ನಂ. 27/13 ಕಲಂ. 454-457-380 ಐ.ಪಿ.ಸಿ.
ದಿನಾಂಕ: 28-02-2013 ರಂದು ಪಿರ್ಯಾದಿ ಶಿವನಂಜಪ್ಪ ಬಿನ್. ನಂಜಪ್ಪ, ಹಾಗನಹಳ್ಳಿ ಗ್ರಾಮ, ಪಾಂಡವಪುರ ತಾಲ್ಲೂಕು ರವರು ನೀಡಿದ ದೂರಿನ ಸಾರಾಂಶವೇನೆಂದರೆ ಎಲ್.ಟಿ.ಎಲ್.ಕೆ. ಕಂಪನಿಯ ಸ್ಟಾಟರ್,ಬೋಡರ್್ ಸಮೇತ ಹಾಗೂ ಮೀಟರ್ ಗೆ ಅಳವಡಿಸಿದ ಸುಮಾರು 150 ಮೀಟರ್ ಕೇಬಲ್ ವೈರನ್ನು ಯಾರೋ ಕಳ್ಳರು ಕಳ್ಳತನ ಮಾಡಿಕೊಂಡು ಹೋಗಿರುತ್ತಾರೆ. ಇದರ ಬೆಲೆ ಸುಮಾರು 23,000 ಸಾವಿರ ರೂಗಳು ಆಗಿರುತ್ತವೆ. ನನಗೆ ನನ್ನ ಮಗ ಬಸವಣ್ಣ ಹೆಚ್.ಎಸ್ ರವರ ಮೇಲೆ ಅನುಮಾನ ಇದೆ. ಆದ್ದರಿಂದ ದಯವಿಟ್ಟು ನನಗೆ ನ್ಯಾಯ ದೊರಕಿಸಿಕೊಡಬೇಕೆಂದು ನೀಡಿದ ದೂರಿನ ಮೇರೆಗೆ ಪ್ರಥಮ ವರ್ತಮಾನ ವರದಿ ದಾಖಲಿಸಲಾಗಿದೆ.
ಮನುಷ್ಯ ಕಾಣೆಯಾದ ಪ್ರಕರಣ :
ಮಂಡ್ಯ ಗ್ರಾಮಾಂತರ ಪೊಲೀಸ್ ಠಾಣೆ ಮೊ.ನಂ. 76/13 ಕಲಂ. ಹುಡುಗಿ ಕಾಣೆಯಾಗಿದ್ದಾಳೆ.
ದಿನಾಂಕ: 28-02-2013 ರಂದು ಪಿರ್ಯಾದಿ ದೊಡ್ಡಚನ್ನೇಗೌಡ, ಬಿನ್. ಬೊಮ್ಮೇಗೌಡ, ಕಬ್ಬನಹಳ್ಳಿ ಗ್ರಾಮ ಗ್ರಾಮ, ಮಂಡ್ಯ ತಾ. ರವರು ನೀಡಿದ ದೂರು ಏನೆಂದರೆ ಪಿರ್ಯಾದಿರವರ ಮಗಳು ಮಂಡ್ಯ ನಗರದ ಮಹಿಳಾ ಕಾಲೇಜಿನಲ್ಲಿ ಬಿ.ಎ. ವ್ಯಾಸಂಗ ಮಾಡುತ್ತಿದ್ದು ದಿನಾಂಕಃ-22-02-2013 ರಂದು ಮನೆಯಿಂದ ಕಾಲೇಜಿಗೆ ಹೋಗಿ ಬರುವುದಾಗಿ ಹೇಳಿ ಹೋದವಳು ಇಲ್ಲಿಯವರೆಗೂ ಮನೆಗೆ ಬಂದಿರುವುದಿಲ್ಲ ಪತ್ತೆ ಮಾಡಿಕೊಡಿ ಎಂದು ದೂರು ನೀಡಿದ ಮೇರೆಗೆ ಪ್ರಕರಣ ದಾಖಲಿಸಲಾಗಿದೆ.
No comments:
Post a Comment